ನವದೆಹಲಿಯಲ್ಲಿ ರಾಮಲೀಲಾ ಮೈದಾನದ ರ‍್ಯಾಲಿ ಮುಂದೂಡಲು ರಾಹುಲ್ ಗಾಂಧಿಗೆ ವರ್ತಕರ ಮನವಿ
ನವದೆಹಲಿ: ‘ಇಂಡಿಯಾ’ ಮೈತ್ರಿಕೂಟವು ನವೆಂಬರ್ 1ರಂದು ರಾಮಲೀಲಾ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ರ್ಯಾಲಿಯನ್ನು ಮುಂದೂಡುವಂತೆ ದೆಹಲಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ (ಸಿಟಿಐ) ಒತ್ತಾಯಿಸಿದೆ. ಈ ಸಂಬಂಧ ಲ...

ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟ ಹಮ್ಮಿಕೊಂಡಿರುವ ಬೃಹತ್ ರ್ಯಾಲಿಯನ್ನು ಮುಂದೂಡುವಂತೆ ದೆಹಲಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಹಬ್ಬದ ಸೀಸನ್ ಆಗಿರುವುದರಿಂದ ರ‍್ಯಾಲಿಯಿಂದಾಗಿ ನಗರದ 20ಕ್ಕೂ ಹೆಚ್ಚು ಮಾರುಕಟ್ಟೆಗಳ ವ್ಯಾಪಾರಕ್ಕೆ ತೊಂದರೆಯಾಗಲಿದೆ ಎಂದು ಸಿಟಿಐ ಅಧ್ಯಕ್ಷ ಬ್ರಿಜೇಶ್ ಗೋಯಲ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚರ್ಚಿಸಲು 20 ನಿಮಿಷಗಳ ಕಾಲಾವಕಾಶ ನೀಡುವಂತೆ ಅವರು ರಾಹುಲ್ ಗಾಂಧಿ ಅವರನ್ನು ಕೋರಿದ್ದಾರೆ. ಚುನಾವಣಾ ಆಯೋಗದ ವಿರುದ್ಧ ನಡೆಯುತ್ತಿರುವ ಈ ಪ್ರತಿಭಟನೆಯನ್ನು ದೀಪಾವಳಿ ನಂತರ ನಡೆಸುವಂತೆ ವರ್ತಕರು ಮನವಿ ಮಾಡಿದ್ದಾರೆ.




