ನೇಹಾ ಬೋರಾ ಹೋರಾಟದ ಹಾದಿ.. ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಹುಲಿ ಎಂದ ನೆಟ್ಟಿಗರು..
ಚುನಾವಣಾ ಅಕ್ರಮಗಳನ್ನು ಖಂಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಇತ್ತೀಚೆಗೆ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಜಂತರ್ ಮಂತರ್ ನಡೆದ ಪ್ರತಿಭಟ...

ಚುನಾವಣಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಐಎಸ್ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ, ಪೊಲೀಸರಿಂದ ತಪ್ಪಿಸಿಕೊಳ್ಳಲು ಬ್ಯಾರಿಕೇಡ್ ಹತ್ತಿ ಓಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ ಈ ಹೋರಾಟದ ವೇಳೆ ಅವರನ್ನು ಪೊಲೀಸರು ವಶಕ್ಕೆ ಪಡೆದರು. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ 23 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದ ನೇಹಾ, ಸದ್ಯ ಜೆಎನ್ಯುನಲ್ಲಿ ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದು, ವಿವಿಧ ವಿದ್ಯಾರ್ಥಿ ಚಳವಳಿಗಳ ಮೂಲಕ ಗುರುತಿಸಿಕೊಂಡಿದ್ದಾರೆ.




