ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಕರ್ನಾಟಕ

ನೆಲಮಂಗಲ ಬಳಿ ಲಾರಿ ಡಿಕ್ಕಿ: ದೇವರಾಯನದುರ್ಗದಿಂದ ಮರಳುತ್ತಿದ್ದ ಕೇರಳದ ಯುವತಿ ಸಾವು

ಬೆಂಗಳೂರು: ದೇವರಾಯನದುರ್ಗ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಮುಗಿಸಿ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಬೆಂಗಳೂರಿಗೆ ಮರಳುತ್ತಿದ್ದ ಕೇರಳ ಮೂಲದ 23 ವರ್ಷದ ಯುವತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಬೆಂಗಳೂರಿನ ನೆಲಮಂಗಲ ತಾಲೂಕಿನ...

· ಬೆಂಗಳೂರು ನಗರ
ದೇವರಾಯನದುರ್ಗ ಟ್ರೆಕ್ಕಿಂಗ್‌ ಹೋಗಿ ವಾಪಸ್‌ ಆಗುವಾಗ ದುರಂತ; ನೆಲಮಂಗಲ ಬಳಿ ಲಾರಿ ಡಿಕ್ಕಿಗೆ ಕೇರಳ ಮೂಲದ ಯುವತಿ ಬಲಿ
ಹಂಚಿಕೊಳ್ಳಿ:

ತುಮಕೂರಿನ ದೇವರಾಯನದುರ್ಗದಲ್ಲಿ ಟ್ರೆಕ್ಕಿಂಗ್ ಮುಗಿಸಿ ಬೆಂಗಳೂರಿಗೆ ಬೈಕ್‌ನಲ್ಲಿ ಮರಳುತ್ತಿದ್ದಾಗ ವೀರನಂಜಿಪುರ ಬಳಿ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ 23 ವರ್ಷದ ಅಲಿನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಅಲ್ಬಿನ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರ ಲಾರಿ ಚಾಲಕ ವಾಹನ ಸಮೇತ ಪರಾರಿಯಾಗಿದ್ದು, ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಅಲಿನಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಶವಾಗಾರಕ್ಕೆ ಕಳುಹಿಸಲಾಗಿದೆ.

ಹಂಚಿಕೊಳ್ಳಿ: