ಪುರಿ ಜಗನ್ನಾಥ ದೇಗುಲದ ಧ್ವಜ ಪವಾಡವಲ್ಲ ವಿಜ್ಞಾನ ಎಂದ ಆರ್‌ಜೆ ಪೃಥ್ವಿ
ಬೆಂಗಳೂರು: ಒಡಿಶಾದ ಪುರಿಯಲ್ಲಿರುವ ಪ್ರಸಿದ್ಧ ಜಗನ್ನಾಥ ದೇವಸ್ಥಾನದ ಧ್ವಜವು ಗಾಳಿಯ ದಿಕ್ಕಿಗೆ ವಿರುದ್ಧವಾಗಿ ಹಾರುತ್ತದೆ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಶತಮಾನಗಳಿಂದ ಭಕ್ತರಲ್ಲಿ ಕುತೂಹಲ ಮೂಡಿಸಿರುವ...

ಒಡಿಶಾದ ಪುರಿ ಜಗನ್ನಾಥ ದೇವಾಲಯದ ಧ್ವಜವು ಗಾಳಿಯ ದಿಕ್ಕಿಗೆ ವಿರುದ್ಧವಾಗಿ ಹಾರಾಡುವ ವಿದ್ಯಮಾನವು ಪವಾಡವಲ್ಲ ಬದಲಾಗಿ ವೈಜ್ಞಾನಿಕ ಪ್ರಕ್ರಿಯೆ ಎಂದು ಮಾಜಿ ಬಿಗ್‌ಬಾಸ್ ಸ್ಪರ್ಧಿ ಆರ್‌ಜೆ ಪೃಥ್ವಿ ಹೇಳಿದ್ದಾರೆ. ಗೋಪುರದ ಎತ್ತರ ಮತ್ತು ಗಾಳಿಯ ಹರಿವಿನ ಬದಲಾವಣೆಯೇ ಇದಕ್ಕೆ ಕಾರಣ ಎಂದು ಅವರು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದ್ದಾರೆ. ಆದರೆ ಇವರ ಈ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರವಾಗಿ ವಿರೋಧಿಸಿದ್ದಾರೆ. ದೇವಸ್ಥಾನದ ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸುವ ಮುನ್ನ ಸರಿಯಾಗಿ ತಿಳಿದುಕೊಳ್ಳುವಂತೆ ಆರ್‌ಜೆ ಪೃಥ್ವಿಯನ್ನು ಹಲವರು ತರಾಟೆಗೆ ತೆಗೆದುಕೊಂಡಿದ್ದಾರೆ.




