ಶಿವಮೊಗ್ಗ: ಜಂಬೂ ಸವಾರಿ ವೇಳೆ ಬೆಳ್ಳಿ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ದಿಕ್ಕಾಪಾಲಾಗಿ ಓಟ
ಶಿವಮೊಗ್ಗ: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ ಸಿಕ್ಕಿದ್ದು ಚಾಮುಂಡಿ ದೇವಿಯನ್ನು ಹೊತ್ತ ಕ್ಯಾಪ್ಟನ್ ಪ್ರಶಾಂತ ರಾಜಗಾಂಭೀರ್ಯವಾಗಿ ಹೆಜ್ಜೆಯಾಗುತ್ತಿದ್ದರೆ ಅತ್ತ ಶಿವಮೊಗ್ಗದಲ್ಲಿ ದಸರಾ ಜಂಬೂಸವಾರಿ ವೇಳೆ...

ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಿಂದ ಆರಂಭವಾದ ಜಂಬೂ ಸವಾರಿ ಮೆರವಣಿಗೆಯ ಸಂದರ್ಭದಲ್ಲಿ ಸೋಮಣ್ಣ ಆನೆ ಏಕಾಏಕಿ ನಿಯಂತ್ರಣ ತಪ್ಪಿ ಓಡಲಾರಂಭಿಸಿತು. ಈ ವೇಳೆ ಆನೆಯ ಮೇಲಿದ್ದ 450 ಕೆಜಿ ತೂಕದ ಬೆಳ್ಳಿ ಅಂಬಾರಿ ಕೆಳಗೆ ಜಾರಿಬಿದ್ದಿದ್ದು, ರಸ್ತೆಯಲ್ಲಿದ್ದ ವಾಹನಗಳಿಗೆ ಹಾನಿಯಾಗಿದೆ. ಆನೆಯ ಆರ್ಭಟದಿಂದ ಗಾಬರಿಗೊಂಡ ಸಾರ್ವಜನಿಕರು ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು. ಅರಣ್ಯ ಇಲಾಖೆಯ ಸಿಬ್ಬಂದಿ ಆನೆಗೆ ಚುಚ್ಚುಮದ್ದು ನೀಡುವ ಮೂಲಕ ಅದನ್ನು ಹತೋಟಿಗೆ ತಂದಿದ್ದು, ಸದ್ಯ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ. ಸಾಗರ್ ಆನೆಗೆ ಆರೋಗ್ಯ ಸಮಸ್ಯೆ ಉಂಟಾದ ಕಾರಣ ಕೊನೆಯ ಕ್ಷಣದಲ್ಲಿ ಸೋಮಣ್ಣ ಆನೆಯನ್ನು ಆಯ್ಕೆ ಮಾಡಲಾಗಿತ್ತು.




