ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ದಸರಾ ಸಂಭ್ರಮಕ್ಕೆ ಚಾಲನೆ ನೀಡಲಿರುವ ನಟ ವಿ. ರವಿಚಂದ್ರನ್

ಮಂಡ್ಯ: ಪಾರಂಪರಿಕ ಶ್ರೀರಂಗಪಟ್ಟಣ ದಸರಾ (Srirangapatna Dasara) ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ನಟ ಹಾಗೂ ನಿರ್ದೇಶಕ ವಿ. ರವಿಚಂದ್ರನ್ (V Ravichandran) ಅವರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಮ...

· ಮಂಡ್ಯ
ಇಂದಿನಿಂದ 4 ದಿನ ಶ್ರೀರಂಗಪಟ್ಟಣ ದಸರಾ ಸಂಭ್ರಮ – ನಟ ರವಿಚಂದ್ರನ್‌ರಿಂದ ಚಾಲನೆ
ಹಂಚಿಕೊಳ್ಳಿ:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ನಟ ವಿ. ರವಿಚಂದ್ರನ್ ಅವರು ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಮಧ್ಯಾಹ್ನ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಅಂಬಾರಿ ಹೊತ್ತ ಮಹೇಂದ್ರ ಆನೆಯ ಜಂಬೂಸವಾರಿ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಾಗಿ ಶ್ರೀರಂಗನಾಥಸ್ವಾಮಿ ದೇವಾಲಯವನ್ನು ತಲುಪಲಿದೆ. ಈ ಮೆರವಣಿಗೆಯಲ್ಲಿ ವಿವಿಧ ಸಾಂಪ್ರದಾಯಿಕ ಕಲಾತಂಡಗಳು ಪಾಲ್ಗೊಳ್ಳಲಿದ್ದು, ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಉಪಸ್ಥಿತರಿರಲಿದ್ದಾರೆ.

ಹಂಚಿಕೊಳ್ಳಿ: