ಸ್ಟಿಂಗ್ ಆಪರೇಷನ್ ವಿಡಿಯೊ: ಸಿದ್ದರಾಮಯ್ಯರಿಂದ ನ್ಯಾಯಾಲಯದ ಮೊರೆ
Siddaramaiah defamation case: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೊ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಸಿದ್ದರಾಮಯ್ಯ ಅವರು ನ್ಯಾಯಾಲಯದ ಮೊರೆ ಹೋಗಿದ್ದು, ತನಿಖೆಗೆ ಒತ್ತಾಯಿಸಿದ್ದ...

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೊದಲ್ಲಿ ತನ್ನ ಹೆಸರನ್ನು ಅನಗತ್ಯವಾಗಿ ಬಳಸಲಾಗುತ್ತಿದೆ ಎಂದು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಡಿಯೊ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಅವರು ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅಲ್ಲದೆ, ಈ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ತನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.




