ಸುಲ್ತಾನ್‌ಪುರ: ನಕಲಿ ಸಹಿಯ ಫಾರ್ಮ್-7 ಅರ್ಜಿಗಳನ್ನು ತಿರಸ್ಕರಿಸಿದ ಚುನಾವಣಾ ಆಯೋಗ
ಲಖನೌ: ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಸಲ್ಲಿಕೆಯಾಗಿದ್ದ 'ನಂದ ಲಾಲ್' ಎಂಬ ಹೆಸರಿನ ಸಹಿಗಳಿದ್ದ ಫಾರ್ಮ್-7 ಅರ್ಜಿಗಳನ್ನು ಪುರಸ್ಕರಿಸಲಾಗಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚ...

ಸುಲ್ತಾನ್‌ಪುರ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 96ರಲ್ಲಿ ನಂದ ಲಾಲ್ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಫಾರ್ಮ್-7 ಅರ್ಜಿಗಳಲ್ಲಿ ನಕಲಿ ಸಹಿ ಇರುವುದು ಕಂಡುಬಂದಿದೆ. ಈ ಅರ್ಜಿಗಳಲ್ಲಿ ಅರ್ಜಿದಾರರ ಗುರುತಿನ ಚೀಟಿ ಹಾಗೂ ಮೊಬೈಲ್ ಸಂಖ್ಯೆಯಂತಹ ಅಗತ್ಯ ಮಾಹಿತಿ ಇಲ್ಲದ ಕಾರಣ ಅವುಗಳನ್ನು ಪರಿಗಣಿಸಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಬೂತ್ ಮಟ್ಟದ ಅಧಿಕಾರಿಯನ್ನು ಚುನಾವಣಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಗಿದೆ. ಸಮಾಜವಾದಿ ಪಕ್ಷದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಎಕ್ಸ್ ಸಾಮಾಜಿಕ ಜಾಲತಾಣದ ಮೂಲಕ ಸಿಇಒ ನವದೀಪ್ ರಿನ್ವಾ ಈ ವಿಷಯವನ್ನು ತಿಳಿಸಿದ್ದಾರೆ.




