ತಲೆಮರೆಸಿಕೊಂಡ ರೇಪ್ ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ – ಕಾನ್ಸ್‌ಟೇಬಲ್ ಅಮಾನತು!
ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಎನ್.ಆರ್ ಪುರ ಠಾಣೆಯ ಕಾನ್ಸ್‌ಟೇಬಲ್ ಒಬ್ಬನನ್ನು ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ...

ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಆತನಿಗೆ ಇಲಾಖೆಯ ಸೂಕ್ಷ್ಮ ಮಾಹಿತಿಯನ್ನು ನೀಡುತ್ತಿದ್ದ ಎನ್.ಆರ್ ಪುರ ಠಾಣೆಯ ಕಾನ್ಸ್‌ಟೇಬಲ್ ಒಬ್ಬನನ್ನು ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅಮಾನತಾದ ಪೇದೆಯನ್ನು ಎನ್.ಆರ್.ಪುರ ಠಾಣೆಯ ಕಾಂತೇಶ್ ಎಂದು ಗುರುತಿಸಲಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿ ಸತೀಶ್ ಪಾತ್ರಿ ಕುಟುಂಬದೊಂದಿಗೆ ಕಾಂತೇಶ್ ನಿರಂತರವಾಗಿ ಸಂಪರ್ಕದಲ್ಲಿದ್ದ ಎಂಬುದು ಬೆಳಕಿಗೆ ಬಂದಿದೆ. ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿರುವ ಆರೋಪಿ ಸತೀಶ್‌ಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ, ಠಾಣೆಯ ಪ್ರತಿಯೊಂದು ಮಾಹಿತಿಯನ್ನು ಕಾಂತೇಶ್ ಆರೋಪಿಗೆ ರವಾನಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.
ಭೂತ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ಕೋಳಿ ರಕ್ತ ಕುಡಿಯುವಂತೆ ಸತೀಶ್ ಹಿಂಸೆ ನೀಡಿದ್ದ. ಈ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆತನ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ.




