ಮುಖ್ಯ ವಿಷಯಕ್ಕೆ ಹೋಗಿ
The Karnataka Today
13 Oct
ಸುದ್ದಿ
ಕರ್ನಾಟಕ

ತಿಪಟೂರಿನಲ್ಲಿ ಭೀಕರ ದುರಂತ: ಸ್ಕೂಟರ್ ಮೇಲೆ ಮರ ಬಿದ್ದು ನಿವೃತ್ತ ಶಿಕ್ಷಕ ದಾರುಣ ಸಾವು..!

ತಿಪಟೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ರಸ್ತೆ ಬದಿಯ ಒಣಗಿದ ಮರದ ದೊಡ್ಡ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂ...

· ತುಮಕೂರು
ತಿಪಟೂರಿನಲ್ಲಿ ಭೀಕರ ದುರಂತ: ಸ್ಕೂಟರ್ ಮೇಲೆ ಮರ ಬಿದ್ದು ನಿವೃತ್ತ ಶಿಕ್ಷಕ ದಾರುಣ ಸಾವು..!
ಹಂಚಿಕೊಳ್ಳಿ:

ತಿಪಟೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ರಸ್ತೆ ಬದಿಯ ಒಣಗಿದ ಮರದ ದೊಡ್ಡ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಸಂಭವಿಸಿದೆ.

ಸುಗುರು ಗ್ರಾಮದ ನಿವಾಸಿ ಶಿವಸ್ವಾಮಿ (65) ಮೃತಪಟ್ಟ ದುರ್ದೈವಿ. ಸೋಮವಾರ ಬೆಳಿಗ್ಗೆ 11.30ರ ಸುಮಾರಿಗೆ ಕಲ್ಪತರು ಕಾಲೇಜಿನ ಸಮೀಪ, ಕಾಲೇಜಿನ ಸಭಾಂಗಣದ ಮುಂಭಾಗದಲ್ಲಿ ಅವರು ವಿದ್ಯುತ್ ಚಾಲಿತ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಈ ನಡುವೆ ಮರವು ಒಣಗಿ ಹೋಗಿದ್ದರೂ ಅದನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇಂತಹ ಘಟನೆಗಳು ಮರುಕಳಿಸದಂತೆ ತಿಪಟೂರು ನಗರಸಭೆ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪ್ರಮುಖ ರಸ್ತೆ ಬದಿಗಳಲ್ಲಿರುವ ಒಣಗಿದ ಮತ್ತು ಅಪಾಯಕಾರಿಯಾದ ಮರಗಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

ಹಂಚಿಕೊಳ್ಳಿ: