ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ತಿರುವನಂತಪುರದಲ್ಲಿ ರಾಹುಲ್ ಗಾಂಧಿ ವಿದೇಶ ಪ್ರವಾಸದ ಕುರಿತು ಪ್ರತಿಕ್ರಿಯಿಸಿದ ಶಶಿ ತರೂರ್

ತಿರುವನಂತಪುರ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿರುವ ಬಗ್ಗೆ ಮಾಧ್ಯಮಗಳ ಪ್ರಶ್...

ನಾನು ಟ್ರಾವೆಲ್‌ ಏಜೆಂಟ್ ಅಲ್ಲ: ರಾಹುಲ್ ಗಾಂಧಿ ವಿದೇಶ ಪ್ರವಾಸದ ಬಗ್ಗೆ ಶಶಿ ತರೂರ್
ಹಂಚಿಕೊಳ್ಳಿ:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ರಾಹುಲ್ ಗಾಂಧಿ ವಿದೇಶಕ್ಕೆ ತೆರಳಿದ್ದಾರೆ. ಈ ವಿಷಯದ ಬಗ್ಗೆ ತಿರುವನಂತಪುರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದ ಶಶಿ ತರೂರ್, ತಾವು ಟ್ರಾವೆಲ್ ಏಜೆಂಟ್ ಅಲ್ಲ ಎಂದು ಹೇಳುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ಅವರ ಪ್ರವಾಸದ ಬಗ್ಗೆ ತಮ್ಮನ್ನು ಪ್ರಶ್ನಿಸುವುದು ಸರಿಯಲ್ಲವೆಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಪ್ರತಿಯೊಬ್ಬ ವ್ಯಕ್ತಿಗೂ ವೈಯಕ್ತಿಕ ಜವಾಬ್ದಾರಿಗಳಿರುತ್ತವೆ ಎಂದು ತಿಳಿಸಿದ ಅವರು, ಈ ವಿಚಾರದಲ್ಲಿ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇತ್ತ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸವನ್ನು ಬಿಜೆಪಿ ಲೇವಡಿ ಮಾಡಿದ್ದು, ದೆಹಲಿ ಪ್ರತಿಭಟನೆಯ ಬಳಿಕ ಅವರು ರಜೆಯ ಮೇಲೆ ತೆರಳಿದ್ದಾರೆ ಎಂದು ಟೀಕಿಸಿದೆ.

ಹಂಚಿಕೊಳ್ಳಿ: