ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಉತ್ತರ ಪ್ರದೇಶ ಚುನಾವಣೆ: ಎಸ್‌ಪಿ ಬಳಿ 175 ರಿಂದ 200 ಸೀಟುಗಳಿಗೆ ಬೇಡಿಕೆ ಇಟ್ಟ ಕಾಂಗ್ರೆಸ್

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಅಳೆದೂ ತೂಗಿ ಸಮಾಜವಾದಿ ಪಕ್ಷದ ಜೊತೆ ಸೀಟು ಹಂಚಿಕೆ ಮಾತುಕತೆ ಆರಂಭಿಸಿದೆ. ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಾಧ್ಯತೆ ಇರುವ...

UP Polls Seat Sharing: ಎಸ್‌ಪಿ ಬಳಿ 175–200 ಸೀಟಿಗೆ ಬೇಡಿಕೆ ಇಟ್ಟ ಕಾಂಗ್ರೆಸ್
ಹಂಚಿಕೊಳ್ಳಿ:

ಉತ್ತರ ಪ್ರದೇಶದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷದ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ. ಈ ಸಂಬಂಧ ಕಾಂಗ್ರೆಸ್ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಸಾಧ್ಯತೆಯಿರುವ 175 ರಿಂದ 200 ಕ್ಷೇತ್ರಗಳ ಪಟ್ಟಿಯನ್ನು ಎಸ್‌ಪಿಗೆ ಸಲ್ಲಿಸಿದ್ದಾರೆ. ಸದ್ಯದಲ್ಲೇ ಉಭಯ ಪಕ್ಷಗಳ ನಾಯಕರು ಈ ಕುರಿತು ನೇರ ಮಾತುಕತೆ ನಡೆಸಲಿದ್ದಾರೆ. ಆದರೆ, ಕಾಂಗ್ರೆಸ್‌ನ ಈ ಬೇಡಿಕೆಯ ಬಗ್ಗೆ ಸಮಾಜವಾದಿ ಪಕ್ಷದ ನಾಯಕರು ಅಸಮಾಧಾನ ಹೊಂದಿದ್ದಾರೆ ಎಂದು ವರದಿಯಾಗಿದೆ. ಗೆಲ್ಲುವ ಸಾಮರ್ಥ್ಯವೇ ಸೀಟು ಹಂಚಿಕೆಗೆ ಮುಖ್ಯ ಮಾನದಂಡವೆಂದು ಎಸ್‌ಪಿ ನಾಯಕರು ತಿಳಿಸಿದ್ದಾರೆ.

ಹಂಚಿಕೊಳ್ಳಿ: