ವಿಜಯಪುರದ ಕೋಲ್ಹಾರದಲ್ಲಿ ಕಾರು-ಬೈಕ್ ಅಪಘಾತ: 2 ವರ್ಷದ ಮಗು ಸ್ಥಳದಲ್ಲೇ ಸಾವು
ವಿಜಯಪುರ: ಬೈಕ್ ಹಾಗೂ ಕಾರ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ 2 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳಿ ನಡೆದಿದೆ. ಅ...

ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ರಾವುತ್ ಎಂಬ ಮಗು ಮೃತಪಟ್ಟಿದೆ. ಈ ದುರ್ಘಟನೆಯಲ್ಲಿ ರೇಣುಕಾ ಮತ್ತು ಯಮನವ್ವ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




