ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಯಾದಗಿರಿಯ ಬಸವಸಾಗರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ: ರೈತರಲ್ಲಿ ಆತಂಕ

ಯಾದಗಿರಿ: ನಾಲ್ಕು ಜಿಲ್ಲೆಯ ಅನ್ನದಾತರ ಪಾಲಿಗೆ ಜೀವನಾಡಿಯಾಗಿರುವ ಬಸವಸಾಗರ ಜಲಾಶಯದಲ್ಲಿನ (Basavasagar Dam) ನೀರು ದಿನೇ ದಿನೇ ಕಡಿಮೆಯಾಗುತ್ತಿದೆ. ಯಾದಗಿರಿ (Yadagiri) ಜಿಲ್ಲೆಯ ಹುಣಸಗಿ (Hunsagi) ತಾಲೂಕಿನ ನಾರ...

· ಯಾದಗಿರಿ
ನಾಲ್ಕು ಜಿಲ್ಲೆಯ ಅನ್ನದಾತರ ಪಾಲಿಗೆ ಜೀವನಾಡಿ – ದಿನೇ ದಿನೇ ಕಡಿಮೆಯಾಗುತ್ತಿದೆ ಬಸವಸಾಗರ ಜಲಾಶಯದ ನೀರು
ಹಂಚಿಕೊಳ್ಳಿ:

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯದಲ್ಲಿ ನೀರಿನ ಸಂಗ್ರಹ ಗಣನೀಯವಾಗಿ ಇಳಿಕೆಯಾಗಿದೆ. 33.33 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 24 ಟಿಎಂಸಿ ನೀರಿದ್ದು, ಅದರಲ್ಲಿ ಕೇವಲ 4 ಟಿಎಂಸಿ ಮಾತ್ರ ಬಳಕೆಗೆ ಲಭ್ಯವಿದೆ. ನೀರಿನ ಅಭಾವದಿಂದಾಗಿ ಮೊದಲ ಬಾರಿಗೆ ವಾರಬಂದಿ ಪದ್ಧತಿಯಲ್ಲಿ ನೀರು ಹರಿಸಲಾಗುತ್ತಿದೆ. ಈ ಪರಿಸ್ಥಿತಿಯಿಂದಾಗಿ ನಾಲ್ಕು ಜಿಲ್ಲೆಗಳ 4.5 ಲಕ್ಷ ಹೆಕ್ಟೇರ್ ಪ್ರದೇಶದ ಹಿಂಗಾರು ಬೆಳೆಗಳಿಗೆ ಸಂಕಷ್ಟ ಎದುರಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಭೀತಿಯನ್ನು ರೈತರು ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: