ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಕರ್ನಾಟಕ

ಯಾದಗಿರಿಯಲ್ಲಿ 3 ಲಕ್ಷ ಲಂಚ ಪಡೆಯುತ್ತಿದ್ದ ಮಾನ್ವಿ ಯೋಜನಾ ಪ್ರಾಧಿಕಾರದ ಅಧಿಕಾರಿ ಬಂಧನ

ರಾಯಚೂರು: ಭೂ ಪರಿವರ್ತನೆಗೆ 3.5 ಲಕ್ಷ ರೂ. ಲಂಚ (Bribe) ಪಡೆಯುತ್ತಿದ್ದ ಮಾನ್ವಿ ನಗರ ಯೋಜನಾ ಪ್ರಾಧಿಕಾರ ಸಹಾಯಕ ನಿರ್ದೇಶಕ ಕಚೇರಿಯ ಪ್ರಭಾರ ನಗರ ಯೋಜನಾ ಸದಸ್ಯ ಕಾರ್ಯದರ್ಶಿಯನ್ನು ಲೋಕಾಯುಕ್ತ (Lokayukta) ಪೊಲೀಸರು...

· ರಾಯಚೂರು
3 ಲಕ್ಷ ಲಂಚ ಪಡೆಯುವಾಗ ʻಲೋಕಾʼ ದಾಳಿ – ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ
ಹಂಚಿಕೊಳ್ಳಿ:

ಮಾನ್ವಿ ನಗರ ಯೋಜನಾ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಯಾಗಿರುವ ಶರಣಪ್ಪ ಅವರು ಭೂ ಪರಿವರ್ತನೆ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶದ ಜಮೀನಾಗಿ ಬದಲಾಯಿಸಲು 3.5 ಲಕ್ಷ ರೂ. ನೀಡುವಂತೆ ಅವರು ಭೂ ಮಾಲೀಕ ಸುಧಾಕರ್ ಅವರಿಗೆ ಒತ್ತಾಯಿಸಿದ್ದರು. ಈ ಕುರಿತು ಸುಧಾಕರ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಅದರಂತೆ, ಯಾದಗಿರಿ ಕಚೇರಿಯಲ್ಲಿ 3 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಶರಣಪ್ಪ ಮತ್ತು ಅವರ ಚಾಲಕ ಸಂತೋಷ್ ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ರಾಯಚೂರು ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಹಂಚಿಕೊಳ್ಳಿ: