ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಆನೇಕಲ್: ನಾಲ್ಕನೇ ಮಹಡಿಯಿಂದ ಬಿದ್ದು ಭುವನೇಶ್ವರಿ ಎಂಬ ಮಹಿಳೆ ಸಾವು

ಬೆಂಗಳೂರು: ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋಗಿ ಕಟ್ಟಡದ 4ನೇ ಮಹಡಿಯಿಂದ ಬಿದ್ದು ಮಹಿಳೆ (Woman) ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ (Anekal) ಪಟ್ಟಣದ ಸಿಪಾಯಿಗಲ್ಲಿಯಲ್ಲಿ ನಡೆದಿದೆ. ಭುವನೇಶ್ವರಿ (49...

· ಬೆಂಗಳೂರು ನಗರ
ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋಗಿ 4ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು
ಹಂಚಿಕೊಳ್ಳಿ:

ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಸಿಪಾಯಿಗಲ್ಲಿಯಲ್ಲಿ ದುರ್ಘಟನೆಯೊಂದು ನಡೆದಿದೆ. ನಾಲ್ಕನೇ ಮಹಡಿಯಲ್ಲಿ ಒಣ ಹಾಕಿದ್ದ ಬಟ್ಟೆಯನ್ನು ತೆಗೆದುಕೊಳ್ಳಲು ತೆರಳಿದ್ದ 49 ವರ್ಷದ ಭುವನೇಶ್ವರಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ: