ಮುಖ್ಯ ವಿಷಯಕ್ಕೆ ಹೋಗಿ
The Karnataka Today
13 Oct
ಸುದ್ದಿ
ಸುದ್ದಿ

ಅಂತರ್‌ರಾಜ್ಯ ಬೈಕ್ ಕಳ್ಳರ ಬಂಧನ: 18 ಲಕ್ಷ ಮೌಲ್ಯದ 29 ದ್ವಿಚಕ್ರ ವಾಹನ ವಶಕ್ಕೆ

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ (Anekal) ಅಂತರ್‌ರಾಜ್ಯ ಕಳ್ಳರ ಗ್ಯಾಂಗ್‌ನ್ನು ಹೆಡೆಮುರಿ ಕಟ್ಟುವಲ್ಲಿ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ...

· ಬೆಂಗಳೂರು ನಗರ
ಅಂತರ್‌ರಾಜ್ಯ ಬೈಕ್ ಕಳ್ಳರ ಬಂಧನ: 18 ಲಕ್ಷ ಮೌಲ್ಯದ 29 ದ್ವಿಚಕ್ರ ವಾಹನ ವಶಕ್ಕೆ
ಹಂಚಿಕೊಳ್ಳಿ:

ಬೆಂಗಳೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ (Anekal)  ಅಂತರ್‌ರಾಜ್ಯ ಕಳ್ಳರ ಗ್ಯಾಂಗ್‌ನ್ನು ಹೆಡೆಮುರಿ ಕಟ್ಟುವಲ್ಲಿ ಜಿಗಣಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಮಿಳುನಾಡು ಮೂಲದ ರಾಜಶೇಖರ್ (28), ಚರಣ್ ಕುಮಾರ್ (19) ಹಾಗೂ ಪವನ್ ಕುಮಾರ್ (21)ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬರೋಬ್ಬರಿ 18 ಲಕ್ಷ ರೂಪಾಯಿ ಮೌಲ್ಯದ 29 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ನಕಲಿ ಕೀಗಳನ್ನು ಬಳಸಿ ಹಾಗೂ ಹ್ಯಾಂಡಲ್ ಲಾಕ್‌ಗಳನ್ನು ಮುರಿದು ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದರು. ಬಳಿಕ ಕದ್ದ ಬೈಕ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ, ಬಂದ ಹಣದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ಜಿಗಣಿ ಪೊಲೀಸ್ ಇನ್‌ಸ್ಪೆಕ್ಟರ್ ನವೀನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಂಚಿಕೊಳ್ಳಿ: