ಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
– ಪತಿ ಸೇರಿ 6 ಜನರ ವಿರುದ್ಧ ಕೇಸ್ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಒಂದೇ ವೇಲ್ನಲ್ಲಿ ಕಟ್ಟಿ ತುಂಗಭದ್ರಾ ಕಾಲುವೆಗೆ ಎಸೆದು, ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡ...

ಬಳ್ಳಾರಿಯ ಅಲ್ಲಿಪುರದ ತುಂಗಭದ್ರಾ ಕಾಲುವೆಯಲ್ಲಿ ಲತೀಪಾ ಸಿಮ್ರಾನ್ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ ಮಹಮ್ಮದ್ ಅಯಾನ್ ಮತ್ತು ಆಯಿಷಾ ಫಾತಿಮಾ ಅವರೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಕ್ಷಿಣೆಗಾಗಿ ಪತಿ ಸದ್ದಾಂ ಹುಸೇನ್ ನೀಡುತ್ತಿದ್ದ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಈ ಕೃತ್ಯಕ್ಕೆ ಕಾರಣ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸದ್ದಾಂ ಹುಸೇನ್ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಲುವೆಯಲ್ಲಿ ತಾಯಿಯ ಮೃತದೇಹ ಪತ್ತೆಯಾಗಿದ್ದು, ನಾಗಲಾಪುರ ಬಳಿ ಮಕ್ಕಳ ದೇಹಗಳು ಸಿಕ್ಕಿವೆ.




