ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬಳ್ಳಾರಿ: ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬಳ್ಳಾರಿ: ಜಿಲ್ಲೆಯಾದ್ಯಂತ ವಿವಿಧ ಪ್ರಮುಖ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲದಲ್ಲಿ ಮಿಂಚಿನ ತಪಾಸಣೆ ಕೈಗೊಂಡಿದ್ದು, ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳಿಗೆ ಬಿಸಿ...

· ಬಳ್ಳಾರಿ
ಬಳ್ಳಾರಿ ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತರ ಮಿಂಚಿನ ದಾಳಿ- ಕಡತಗಳ ಪರಿಶೀಲನೆ
ಹಂಚಿಕೊಳ್ಳಿ:

ಬಳ್ಳಾರಿ ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕರ್ತವ್ಯಲೋಪದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆರ್‌ಟಿಒ ಮತ್ತು ಎಡಿಎಲ್‌ಆರ್ ಕಚೇರಿ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಮತ್ತು ಸಾರ್ವಜನಿಕರ ದೂರುಗಳನ್ನು ಆಧರಿಸಿ ತಪಾಸಣೆ ಕೈಗೊಳ್ಳಲಾಗಿದೆ. ಅಧಿಕಾರಿಗಳು ಸಿಬ್ಬಂದಿಯ ಹಾಜರಾತಿ ಹಾಗೂ ಕಚೇರಿಯ ಕಾರ್ಯವೈಖರಿಯನ್ನು ಪರಿಶೀಲಿಸುತ್ತಿದ್ದು, ಮಧ್ಯವರ್ತಿಗಳ ಹಾವಳಿ ಹಾಗೂ ಕೆಲಸ ವಿಳಂಬದ ಬಗ್ಗೆಯೂ ಮಾಹಿತಿ ಕಲೆಹಾಕಿದ್ದಾರೆ. ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲೂ ಈ ಕಾರ್ಯಾಚರಣೆ ಮುಂದುವರಿದಿದ್ದು, ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

ಹಂಚಿಕೊಳ್ಳಿ: