ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೀದರ್: ಹುಮ್ನಾಬಾದ್ ಪೊಲೀಸ್ ಠಾಣೆ ಆವರಣದಲ್ಲಿ ಪಟಾಕಿ ಕಿಡಿಯಿಂದ 6 ಕಾರುಗಳು ಅಗ್ನಿಗಾಹುತಿ

ಬೀದರ್‌: ದೀಪಾವಳಿ ಹಬ್ಬದ ಅಂಗವಾಗಿ ಸಿಡಿಸಿದ ಪಟಾಕಿ ಕಿಡಿಯಿಂದ ಅಗ್ನಿ ಅವಘಡ ಸಂಭವಿಸಿ 6 ಕಾರುಗಳು (Car Blast) ಸುಟ್ಟು ಕರಕಲಾದ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ಪೋಲಿಸ್ ಠಾಣೆ (Fire Accident) ಆವರಣದಲ...

· ಬೀದರ್
ಪಟಾಕಿಯಿಂದ ಬೀದರ್‌ನಲ್ಲಿ ಕಾರ್ಗಿಚ್ಚು – ಪೊಲೀಸರು ಜಪ್ತಿ ಮಾಡಿದ್ದ 6 ಕಾರುಗಳು ಭಸ್ಮ
ಹಂಚಿಕೊಳ್ಳಿ:

ಬೀದರ್ ಜಿಲ್ಲೆಯ ಹುಮ್ನಾಬಾದ್ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಆರು ಕಾರುಗಳು ಪಟಾಕಿ ಸಿಡಿದ ಪರಿಣಾಮ ಬೆಂಕಿಗೆ ಆಹುತಿಯಾಗಿವೆ. ಈ ವಾಹನಗಳನ್ನು ಕಳೆದ ಎರಡು ವರ್ಷಗಳಿಂದ ವಿವಿಧ ಪ್ರಕರಣಗಳ ತನಿಖೆಯ ಭಾಗವಾಗಿ ಪೊಲೀಸರು ವಶಕ್ಕೆ ಪಡೆದು ಅಲ್ಲಿಯೇ ಇರಿಸಿದ್ದರು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಿದ ಪಟಾಕಿಯ ಕಿಡಿಗಳು ಕಾರುಗಳ ಮೇಲೆ ಬಿದ್ದಿದ್ದರಿಂದ ಈ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಷ್ಟರಲ್ಲಿ ವಾಹನಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು. ಘಟನೆಯಿಂದಾಗಿ ಪೊಲೀಸ್ ಠಾಣೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಸದ್ಯ ಹುಮ್ನಾಬಾದ್ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: