ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೀದರ್ ಜಿಲ್ಲೆಯ ನಿರ್ಣಾ ಗ್ರಾಮದ ಪೆಟ್ರೋಲ್ ಪಂಪ್‌ನಲ್ಲಿ ಮಲಗಿದ್ದ ವ್ಯಕ್ತಿ ಸಜೀವ ದಹನ

ಬೀದರ್: ಪೆಟ್ರೋಲ್ ಪಂಪ್‌ನಲ್ಲಿ ಮಲಗಿದ್ದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವ್ಯಕ್ತಿ ಸಜೀವ ದಹನಗೊಂಡಿರುವ ದಾರುಣ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ (Chitaguppa) ತಾಲೂಕಿನ ನಿರ್ಣಾ ಗ್ರಾಮದಲ್ಲಿ ನಡೆದಿ...

· ಬೀದರ್
ಏಕಾಏಕಿ ಕಾಣಿಸಿಕೊಂಡ ಬೆಂಕಿ – ಪೆಟ್ರೋಲ್ ಪಂಪ್‌ನಲ್ಲಿ ಮಲಗಿದ್ದ ವ್ಯಕ್ತಿ ಸಜೀವ ದಹನ
ಹಂಚಿಕೊಳ್ಳಿ:

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ಒಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಾಲಾಜಿ ದಾಸೂರ ಎಂಬುವವರು ಮೃತಪಟ್ಟಿದ್ದಾರೆ. ದಸರಾ ರಜೆ ಕಾರಣದಿಂದಾಗಿ ಸಿಬ್ಬಂದಿ ಇಲ್ಲದಿದ್ದಾಗ ಬಂಕ್‌ನಲ್ಲಿ ಮಲಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸ್ಥಳ ಪರಿಶೀಲನೆ ನಡೆಸಿದ್ದು, ಮನ್ನಾಏಖ್ಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಂಚಿಕೊಳ್ಳಿ: