ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಸುದ್ದಿ

ಬೀದರ್‌ನ ಅಣದೂರು ಗ್ರಾಮದಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ

ಬೀದರ್: ಸಚಿವ ಈಶ್ವರ್ ಖಂಡ್ರೆ ಅವರ ತವರು ಜಿಲ್ಲೆ ಬೀದರ್‌ನಲ್ಲಿ (Bidar) ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಪಬ್ಲಿಕ್ ಟಿವಿ ಪ್ರಸಾರ ಮಾಡಿದ್ದ ಎಕ್ಸ್‌ಕ್ಲೂಸಿವ್ ವರದಿಯ ಬೆನ್ನಲ್ಲೇ ಗಣಿ ಮತ್ತು ಭೂ...

· ಬೀದರ್
Public TV Impact | ಬೀದರ್‌ನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ
ಹಂಚಿಕೊಳ್ಳಿ:

ಬೀದರ್ ತಾಲೂಕಿನ ಅಣದೂರು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಸರ್ವೆ ನಂಬರ್ 204, 205 ಮತ್ತು 206 ಸೇರಿದಂತೆ ಒಟ್ಟು 20 ಎಕರೆಗೂ ಅಧಿಕ ಪ್ರದೇಶದಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಗಣಿಗಾರಿಕೆಗೆ ಬಳಸುತ್ತಿದ್ದ ಕಲ್ಲು ಕಟಿಂಗ್ ಯಂತ್ರಗಳು ಹಾಗೂ ಟ್ಯಾಂಕರ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಜಪ್ತಿ ಮಾಡಿದ ಸಾಮಗ್ರಿಗಳನ್ನು ಜನವಾಡ ಪೊಲೀಸ್ ಠಾಣೆಗೆ ರವಾನಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲು ಹಾಗೂ ನ್ಯಾಯಾಲಯದಲ್ಲಿ ದೂರು ದಾಖಲಿಸಲು ಇಲಾಖೆ ಸಿದ್ಧತೆ ನಡೆಸಿದೆ.

ಹಂಚಿಕೊಳ್ಳಿ: