ಬೀದರ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿಗಾಹುತಿಯಾದ ಮನೆ!
ಬೀದರ್: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಧಗಧಗ ಹೊತ್ತಿ ಉರಿದ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ (fire Accident) ಗ್ರಾಮದಲ್ಲಿ ನಡೆದಿದೆ. ಚುಕ್ಕೆಮ್ಮ ಅವರ ಮನೆಯಲ್ಲಿ ಶಾರ್ಟ್ ಸರ್ಕ್...

ಬೀದರ್ (Bidar) ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಮುಧ್ನಾಳ್ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣದಿಂದಾಗಿ ಮನೆಯೊಂದು ಬೆಂಕಿಗೆ ಆಹುತಿಯಾದ ಘಟನೆ ವರದಿಯಾಗಿದೆ.
ಚುಕ್ಕೆಮ್ಮ ಅವರ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಅಗ್ನಿ ಅವಘಡ (fire Accident) ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡು ದಟ್ಟವಾದ ಹೊಗೆ ಆವರಿಸಿದ್ದರಿಂದ ಗ್ರಾಮದಲ್ಲಿ ಸ್ವಲ್ಪ ಸಮಯ ಆತಂಕದ ವಾತಾವರಣ ಉಂಟಾಗಿತ್ತು.
ಮನೆಯ ಹಾಲ್ ಮತ್ತು ಕಿಚನ್ ರೂಂಗೆ ಬೆಂಕಿ ವ್ಯಾಪಿಸಿದ್ದರಿಂದ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ. ಮನೆಯಲ್ಲಿದ್ದ ದಿನಸಿ ಸಾಮಗ್ರಿಗಳು, ಫ್ರಿಡ್ಜ್ ಹಾಗೂ ಇತರೆ ವಸ್ತುಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಭಸ್ಮವಾಗಿವೆ.
ಗ್ರಾಮಸ್ಥರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ತಲುಪಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಅದೃಷ್ಟವಶಾತ್ ಈ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಿಟಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಬಂಧಿಸಿ ಜೈಲಿಗಟ್ಟಿದರೆ ಸಮಸ್ಯೆಗೆ ಪರಿಹಾರ ಸಿಗಲ್ಲ- ಅಪರಾಧಿಗಳಿಗೆ ಭಯ ಹುಟ್ಟಿಸಿ: ದೆಹಲಿ ಪೊಲೀಸರಿಗೆ ಸುಪ್ರೀಂ ಸೂಚನೆ




