ಬೀದರ್: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬೀದರ್: ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಸ್ಥರಿಗೆ ಶಾಸಕ ಶೈಲೇಂದ್ರ ಬೆಲ್ದಾಳೆ (Shailendra Beldale) ಅವರಿಂದು 5 ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ವಿತರಿಸಿದರು. ಬೀದರ್ (Bidar) ದಕ್ಷಿಣ ವಿಧಾನಸಭಾ ಕ್ಷೇತ...

ಬೀದರ್ ದಕ್ಷಿಣ ಕ್ಷೇತ್ರದ ಬರೂರ ಗ್ರಾಮದ ರೋಷನ್ ಎಂಬ ಯುವಕನು ಇತ್ತೀಚೆಗೆ ವಿದ್ಯುತ್ ಅವಘಡದಲ್ಲಿ ಮೃತಪಟ್ಟಿದ್ದನು. ಈ ಘಟನೆಯ ಹಿನ್ನೆಲೆಯಲ್ಲಿ ಜೆಸ್ಕಾಂ ಇಲಾಖೆಯು ಮೃತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಬೀದರ್ ನಗರದ ಪ್ರತಾಪ ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಮೃತ ಯುವಕನ ತಾಯಿಗೆ ಪರಿಹಾರದ ಚೆಕ್ ಅನ್ನು ಹಸ್ತಾಂತರಿಸಿದರು. ಈ ವೇಳೆ ಶಾಸಕರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.




