ಬೆಳಗಾವಿ ಅಧಿವೇಶನಕ್ಕೆ ಭಾರಿ ಭದ್ರತೆ: 7 ಸಾವಿರ ಪೊಲೀಸರ ನಿಯೋಜನೆಗೆ ಸಿದ್ಧತೆ
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಡಿಸೆಂಬರ್ 2ರಿಂದ 11ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Winter Session) ದಿನಗಣನೆ ಆರಂಭವಾಗಿದ್ದು, ಈ ಬಾರಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ...

ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ 11ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕಾಗಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ನೇತೃತ್ವದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಈ ಬಾರಿ 7 ಸಾವಿರ ಪೊಲೀಸರು ಮತ್ತು 35 ಕೆಎಸ್ಆರ್ಪಿ ತುಕಡಿಗಳನ್ನು ನಿಯೋಜಿಸಲಾಗುತ್ತಿದ್ದು, ಶಿಂದೊಳ್ಳಿಯಲ್ಲಿ ಇವರ ವಾಸ್ತವ್ಯಕ್ಕಾಗಿ ಟೆಂಟ್ ಟೌನ್ಶಿಪ್ ನಿರ್ಮಿಸಲಾಗುತ್ತಿದೆ. ಪ್ರತಿಭಟನೆಗಳ ಮೇಲೆ ನಿಗಾ ಇಡಲು 600 ಸಿಸಿಟಿವಿ ಕ್ಯಾಮೆರಾಗಳು ಹಾಗೂ 10 ಡ್ರೋನ್ಗಳನ್ನು ಬಳಸಲಾಗುವುದು. ಸುವರ್ಣಸೌಧದ ಸುತ್ತಮುತ್ತ ನವೆಂಬರ್ 15ರಿಂದ ಜನವರಿ 15ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.




