ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಳಗಾವಿ: ಎಸ್‌ಐಆರ್ ಕುರಿತ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಸತೀಶ್ ಜಾರಕಿಹೊಳಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯ ನಿಜವಾದ ಆಶಯವನ್ನು ತಪ್ಪಾಗಿ ಅರ್ಥೈಸಲಾಗಿ...

· ಬೆಳಗಾವಿ
ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿದೆ ಎಂಬ ಹೇಳಿಕೆ ನೀಡಿಲ್ಲ, ತಪ್ಪಾಗಿ ಅರ್ಥೈಸಲಾಗಿದೆ; ಸತೀಶ್ ಜಾರಕಿಹೊಳಿ
ಹಂಚಿಕೊಳ್ಳಿ:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ತಾವು ಬೆಂಬಲಿಸಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಫಾರ್ಮ್-7 ಬಳಸಿ ಮತದಾರರ ಹೆಸರು ಅಳಿಸಲು ನಡೆದಿದ್ದ ಪ್ರಯತ್ನವನ್ನು ತಡೆದಿದ್ದೇವು ಎಂಬ ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ತಮ್ಮ ಯಮಕನಮರಡಿ ಕ್ಷೇತ್ರದಲ್ಲಿ 17,000 ಮತಗಳು ಡಿಲೀಟ್ ಆಗಿದ್ದು, ಹೊಸ ಪಟ್ಟಿ ಬಂದ ನಂತರ ಪರಿಶೀಲನೆ ನಡೆಸುವುದಾಗಿ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಹೋರಾಟಕ್ಕೆ ತಾವು ಬದ್ಧರಾಗಿದ್ದು, ಮತದಾರರ ಪಟ್ಟಿ ಅಕ್ರಮದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.

ಹಂಚಿಕೊಳ್ಳಿ: