ಬೆಳಗಾವಿ: ಸರ್ಕಾರಿ ಗೌರವದೊಂದಿಗೆ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅಂತ್ಯಕ್ರಿಯೆ
ಬೆಳಗಾವಿ: ಉತ್ತರಾಖಂಡದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ (Uttarakhand Helicopter Crash) ಸಾವನ್ನಪ್ಪಿದ್ದ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ (CCB Inspector Arun Salunke) ಅಂತ್ಯ ಸಂಸ್ಕಾರ ಅ...

ಉತ್ತರಾಖಂಡ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅವರ ಅಂತ್ಯಕ್ರಿಯೆಯು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದಲ್ಲಿ ನೆರವೇರಿತು. ಮರಾಠಾ ಸಂಪ್ರದಾಯದಂತೆ ನಡೆದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮೂರು ಸುತ್ತು ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಮೃತರ ಪುತ್ರ ವಲ್ಲಭ ಅವರು ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಅಜಯ್ ಹಿಲೋರಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು, ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅರುಣ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.




