ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಳಗಾವಿಯಲ್ಲಿ ರೈತರ ಹೆದ್ದಾರಿ ತಡೆಗೆ ಜಿಲ್ಲಾಡಳಿತ ತಡೆ, ನಿಷೇಧಾಜ್ಞೆ ಜಾರಿ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕಬ್ಬು ಬೆಳೆಗಾರರು, ನಾಳೆ (ಅ. 31) ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಬೆಳಗಾವಿ (Belagavi Farmer Prote...

· ಬೆಳಗಾವಿ
ಕಬ್ಬು ಬೆಳೆಗಾರರ ಹೋರಾಟಕ್ಕೆ ಜಿಲ್ಲಾಡಳಿತ ಬ್ರೇಕ್ – ರಾಷ್ಟ್ರೀಯ ಹೆದ್ದಾರಿ, ಟೋಲ್ ಪ್ಲಾಜಾಗಳ ಬಂದ್‌ಗೆ ನಿಷೇಧಾಜ್ಞೆ ಜಾರಿ
ಹಂಚಿಕೊಳ್ಳಿ:

ಕಬ್ಬಿಗೆ ಸರಿಯಾದ ಬೆಲೆ ನೀಡುವಂತೆ ಆಗ್ರಹಿಸಿ ಅಕ್ಟೋಬರ್ 31 ರಂದು ಕಬ್ಬು ಬೆಳೆಗಾರರು ನಡೆಸಲು ಉದ್ದೇಶಿಸಿದ್ದ ರಾಷ್ಟ್ರೀಯ ಹೆದ್ದಾರಿ ಬಂದ್ ಪ್ರತಿಭಟನೆಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಈ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 48 ಸೇರಿದಂತೆ ಜಿಲ್ಲೆಯ ಪ್ರಮುಖ ರಸ್ತೆಗಳು ಹಾಗೂ ಟೋಲ್ ಪ್ಲಾಜಾಗಳಲ್ಲಿ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಹಂಚಿಕೊಳ್ಳಿ: