ಬೆಂಗಳೂರಿನ 19 ರೈಲುಗಳ ಸಂಚಾರ ವೇಳಾಪಟ್ಟಿಯಲ್ಲಿ ನೈಋತ್ಯ ರೈಲ್ವೆಯಿಂದ ಬದಲಾವಣೆ
ನೈಋತ್ಯ ರೈಲ್ವೆ ವಿಭಾಗವು ಬೆಂಗಳೂರಿನ 19 ಪ್ರಮುಖ ರೈಲುಗಳ ಆಗಮನ ಮತ್ತು ನಿರ್ಗಮನ ಸಮಯವನ್ನು ಪರಿಷ್ಕರಿಸಿದೆ. ಉದ್ಯಾನ ಎಕ್ಸ್‌ಪ್ರೆಸ್ ಸೇರಿದಂತೆ ಹಲವು ರೈಲುಗಳ ಹೊಸ ವೇಳಾಪಟ್ಟಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ಪ್ರ...

ನೈಋತ್ಯ ರೈಲ್ವೆ ವಲಯವು ಬೆಂಗಳೂರಿನ ವಿವಿಧ ನಿಲ್ದಾಣಗಳ ಮೂಲಕ ಸಂಚರಿಸುವ 19 ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯವನ್ನು ಪರಿಷ್ಕರಿಸಿದೆ. ನವೆಂಬರ್ 11 ರಿಂದ ಹಂತ ಹಂತವಾಗಿ ಈ ಹೊಸ ವೇಳಾಪಟ್ಟಿ ಜಾರಿಗೆ ಬರಲಿದ್ದು, ಕೆಎಸ್‌ಆರ್ ಬೆಂಗಳೂರು - ಮುಂಬೈ ಉದ್ಯಾನ ಎಕ್ಸ್‌ಪ್ರೆಸ್ ಸೇರಿದಂತೆ ಪ್ರಮುಖ ರೈಲುಗಳ ಸಮಯದಲ್ಲಿ ಬದಲಾವಣೆಯಾಗಿದೆ. ಪ್ರಯಾಣಿಕರು ಅನಾನುಕೂಲತೆ ತಪ್ಪಿಸಲು ರೈಲ್ವೆಯ ಅಧಿಕೃತ ವೆಬ್‌ಸೈಟ್ ಅಥವಾ ಆ್ಯಪ್ ಮೂಲಕ ನಿಖರವಾದ ಸಮಯವನ್ನು ಪರಿಶೀಲಿಸಿಕೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮುಂಬೈನ ಸಿಎಸ್‌ಎಂಟಿ ನಿಲ್ದಾಣದಲ್ಲಿ ರೈಲುಗಳ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.




