ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಿಟ್ ಅಂಡ್ ರನ್: ಬೈಕ್ ಸವಾರನಿಗೆ ಗಂಭೀರ ಗಾಯ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಫಾರ್ಚೂನರ್ ಕಾರೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾದ ಭೀಕರ ಹಿಟ್ ಅಂಡ್ ರನ್ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಕೊಳ್ಳೆಗಾಲ...

· ಬೆಂಗಳೂರು ನಗರ
ರಸ್ತೆ ಮೇಲೆ ಬಿದ್ದು ನರಳಾಡಿದ್ರೂ ಕರಗದ ಹೃದಯ, ಬೆಂಗಳೂರಲ್ಲಿ ಭೀಕರ ಹಿಟ್‌ ಅಂಡ್‌ ರನ್‌ಗೆ ICU ಸೇರಿದ ಬೈಕ್ ಸವಾರ
ಹಂಚಿಕೊಳ್ಳಿ:

ಬೆಂಗಳೂರಿನ ಬಸಾಪುರ ಬಳಿ ಮೂರು ದಿನಗಳ ಹಿಂದೆ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಕೊಳ್ಳೆಗಾಲ ಮೂಲದ 26 ವರ್ಷದ ಮೂರ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. KA51 MW 8744 ಸಂಖ್ಯೆಯ ಪಾರ್ಚೂನರ್ ಕಾರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದಲ್ಲಿ ಮೂರ್ತಿ ಅವರ ಕಾಲು ಕಟ್ ಆಗಿದ್ದು, ಸದ್ಯ ಅವರು ವಿಕ್ಟೋರಿಯಾ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದವರು ಮದ್ಯಪಾನ ಮಾಡಿದ್ದರು ಎಂದು ಸ್ಥಳೀಯರು ಆರೋಪಿಸಿದ್ದು, ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಹಂಚಿಕೊಳ್ಳಿ: