ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮತ್ತೆ ಟ್ರಸ್ಟ್ ಸುಪರ್ದಿಗೆ ಒಪ್ಪಿಸಿದ ಹೈಕೋರ್ಟ್
– ದೇವಸ್ಥಾನಕ್ಕೆ ಆಡಳಿತಧಿಕಾರಿ ನೇಮಕ ಸಹ ರದ್ದು ಬೆಂಗಳೂರು: ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನ (Gali Anjaneya Swamy Temple) ಮುಜರಾಯಿ ಇಲಾಖೆಯ ಸುಪರ್ದಿಗೆ...

ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಸೇರಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ದೇವಸ್ಥಾನದ ಹುಂಡಿ ಹಣ ಕಳವು ಪ್ರಕರಣದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ಪ್ರಶ್ನಿಸಿ ಟ್ರಸ್ಟಿ ಬಿ.ಪಿ ನಾಗರಾಜು ನ್ಯಾಯಾಲಯದ ಮೆಟ್ಟಿಲೇರಿದ್ದರು. ವಾದ ಆಲಿಸಿದ ನ್ಯಾಯಾಲಯವು ದೇವಸ್ಥಾನಕ್ಕೆ ನೇಮಕವಾಗಿದ್ದ ಆಡಳಿತಾಧಿಕಾರಿಯನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದೆ. ಅಲ್ಲದೆ ಒಂದು ವಾರದೊಳಗೆ ಆಡಳಿತದ ಜವಾಬ್ದಾರಿಯನ್ನು ಟ್ರಸ್ಟ್‌ಗೆ ಹಸ್ತಾಂತರಿಸುವಂತೆ ಆದೇಶಿಸಿದ್ದು, ಆರೋಪಗಳ ಕುರಿತು ತನಿಖೆ ಮುಂದುವರಿಸಲು ಅವಕಾಶ ನೀಡಿದೆ.




