ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬೆಂಗಳೂರಿನ ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು ಮತ್ತು ಹಣ್ಣುಗಳ ಬೆಲೆ

ಬೆಂಗಳೂರಿನಲ್ಲಿ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಮಳೆ ಕೊರತೆಯಿಂದಾಗಿ ಫಸಲು ಕಡಿಮೆಯಾಗಿದ್ದು, ಮಾರುಕಟ್ಟೆಯಲ್ಲಿ ವಸ್ತುಗಳ ದ...

· ಬೆಂಗಳೂರು ನಗರ
ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್ , ಆಯುಧ ಪೂಜೆ  ಹಿನ್ನೆಲೆ ಹೂವು, ಹಣ್ಣುಗಳ ಬೆಲೆ  ಗಗನಕ್ಕೆ!
ಹಂಚಿಕೊಳ್ಳಿ:

ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರ ಹಾಗೂ ಯಶವಂತಪುರ ಸೇರಿದಂತೆ ವಿವಿಧೆಡೆ ಹೂವು ಮತ್ತು ಹಣ್ಣುಗಳ ದರ ಭಾರೀ ಏರಿಕೆಯಾಗಿದೆ. ಮಳೆ ಕೊರತೆಯಿಂದ ಫಸಲು ಕಡಿಮೆಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.50ರಷ್ಟು ದರ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಕನಕಾಂಬರ, ಮಲ್ಲಿಗೆಯಂತಹ ಹೂವುಗಳು ಹಾಗೂ ಸೇಬು, ದಾಳಿಂಬೆಯಂತಹ ಹಣ್ಣುಗಳ ಬೆಲೆ ದುಪ್ಪಟ್ಟಾಗಿದ್ದರೂ, ಗ್ರಾಹಕರು ಅನಿವಾರ್ಯವಾಗಿ ಖರೀದಿಯಲ್ಲಿ ತೊಡಗಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ನೆರೆಯ ರಾಜ್ಯಗಳಿಂದ ಮಾರುಕಟ್ಟೆಗೆ ಸರಕುಗಳು ಬಂದಿದ್ದರೂ, ಬೆಲೆ ಮಾತ್ರ ಸಾಮಾನ್ಯ ಜನರ ಕೈಗೆಟುಕದಂತಾಗಿದೆ.

ಹಂಚಿಕೊಳ್ಳಿ: