ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ
ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಮನೆಗೆ ಗ್ಯಾಸ್ ಸಿಲಿಂಡರ್ ತರುವಾಗ ಹೊಸ್ತಿಲ ಮೇಲಿದ್ದ ದೀಪದ ಬೆಂಕಿ ತಗುಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಡೆಲಿವರಿ ಬಾಯ್ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ...

ಬೆಂಗಳೂರಿನ ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ಮನೆಗೆ ಸಿಲಿಂಡರ್ ಪೂರೈಸಲು ಬಂದಿದ್ದ ಡೆಲಿವರಿ ಬಾಯ್ ಬಾಗಿಲ ಬಳಿ ಅದನ್ನು ಇರಿಸುತ್ತಿದ್ದಾಗ ಅನಿಲ ಸೋರಿಕೆಯಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಮನೆಯ ಹೊಸ್ತಿಲ ಬಳಿ ಬೆಳಗಿದ್ದ ದೀಪಕ್ಕೆ ಅನಿಲ ತಗುಲಿದ್ದರಿಂದ ಸಿಲಿಂಡರ್ ಏಕಾಏಕಿ ಬೆಂಕಿಗೆ ಆಹುತಿಯಾಗಿದೆ. ತಕ್ಷಣವೇ ಎಚ್ಚೆತ್ತುಕೊಂಡ ಡೆಲಿವರಿ ಬಾಯ್ ಸ್ಥಳದಿಂದ ದೂರ ಸರಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಲಿಂಡರ್ ಡೆಲಿವರಿ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.




