ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ
ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ಎಲ್ಲಾ ಬಸ್ ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯವಾಗಿದೆ. ರಸ್ತೆ ಸುರಕ್ಷತಾ ನಿಯಮಗಳ ಪ್ರಕಾರ, ವಾಣಿಜ್ಯ ವಾಹನಗಳು ಮತ್ತು ಬಸ್ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬ...

ರಾಜ್ಯದ ರಸ್ತೆ ಸುರಕ್ಷತಾ ನಿಯಮಗಳ ಅನ್ವಯ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಎಐ ಕ್ಯಾಮೆರಾ ಮತ್ತು ಸಂಚಾರ ಪೊಲೀಸರು ನಿಯಮ ಉಲ್ಲಂಘಿಸುವವರ ಮೇಲೆ ನಿಗಾ ವಹಿಸಿದ್ದು, ಇತ್ತೀಚೆಗೆ ವಿಧಾನಸೌಧ ಮೆಟ್ರೋ ನಿಲ್ದಾಣದ ಬಳಿ ಕೆಎ 57 ಎಫ್ 6558 ಬಸ್ ಚಾಲಕನಿಗೆ 500 ರೂಪಾಯಿ ದಂಡ ವಿಧಿಸಲಾಗಿದೆ. ಆದರೆ ಹಲವು ಬಸ್ಗಳಲ್ಲಿ ಸೀಟ್ ಬೆಲ್ಟ್ಗಳು ದುರಸ್ತಿಯಲ್ಲಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಹೀಗಾಗಿ ಸೀಟ್ ಬೆಲ್ಟ್ಗಳನ್ನು ಸರಿಪಡಿಸುವ ಜವಾಬ್ದಾರಿಯನ್ನು ಬಿಎಂಟಿಸಿ ವಹಿಸಿಕೊಳ್ಳಬೇಕು ಮತ್ತು ಚಾಲಕರಲ್ಲಿ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕಿದೆ.




