ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಯುಕೆ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ
ಬೆಂಗಳೂರು: ತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ ಮತ್ತು ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಸುವ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಯುನೈಟೆಡ್ ಕಿಂಗ್‌ಡಮ್ (UK) ನಡುವಿನ ಸಹಕಾರವನ್ನು ಬಲಪಡಿಸಲು ರಾಜ್ಯ ಸರ್ಕಾರ ಮುಂ...

ತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಸಹಕಾರ ನೀಡಲು ಕರ್ನಾಟಕ ಸರ್ಕಾರವು ಯುನೈಟೆಡ್ ಕಿಂಗ್‌ಡಮ್‌ನೊಂದಿಗೆ ಕೈಜೋಡಿಸಿದೆ. ಈ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಯಾರ್ಕ್ ಮತ್ತು ನಾರ್ತ್ ಯಾರ್ಕ್‌ಷೈರ್ ಮೇಯರ್ ಡೇವಿಡ್ ಸ್ಕೈತ್ ಅವರೊಂದಿಗೆ ಚರ್ಚೆ ನಡೆಸಿದ್ದು, ಮುಂದಿನ ಮೂರು ವರ್ಷಗಳಲ್ಲಿ ಜಂಟಿ ಸಂಶೋಧನೆ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ರಾಜ್ಯದ ಐಟಿ-ಬಿಟಿ ಇಲಾಖೆ ಹಾಗೂ ಯೂನಿವರ್ಸಿಟಿ ಆಫ್ ಯಾರ್ಕ್ ನಡುವೆ ಉದ್ದೇಶ ಪತ್ರಕ್ಕೆ ಸಹಿ ಹಾಕಲಾಗಿದೆ. ಈ ಮೂಲಕ ಸ್ಟಾರ್ಟ್‌ಅಪ್‌ಗಳಿಗೆ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸುವುದರ ಜೊತೆಗೆ ತ್ಯಾಜ್ಯದಿಂದ ಆರ್ಥಿಕ ಮೌಲ್ಯ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುವುದು.




