ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಸುದ್ದಿ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಇಂದಿನ ಕ್ರಿಕೆಟ್ ಪಂದ್ಯಕ್ಕೆ ಸಂಚಾರ ನಿರ್ಬಂಧ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಿರ್ಣಾಯಕ ಟಿ20 ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತಲಿನ ಸಂಚಾರ ಮಾರ್ಗ ಮತ್ತು ಪಾರ್ಕಿಂಗ್ ವ್ಯವಸ್ಥ...

· ಬೆಂಗಳೂರು ನಗರ
Bengaluru: ಮನೆಯಿಂದ ಹೊರಬರುವ ಮುನ್ನ ಹುಷಾರ್; ಈ ಮಾರ್ಗದಲ್ಲಿ ಸಂಚಾರ ಬಂದ್, ಪಾರ್ಕಿಂಗ್ ಬ್ಯಾನ್!
ಹಂಚಿಕೊಳ್ಳಿ:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಅಂತಿಮ ಟಿ20 ಪಂದ್ಯದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಕ್ವೀನ್ಸ್ ರಸ್ತೆ, ಎಂ.ಜಿ ರಸ್ತೆ, ಕಬ್ಬನ್ ರಸ್ತೆ ಸೇರಿದಂತೆ ಹಲವು ಪ್ರಮುಖ ಮಾರ್ಗಗಳಲ್ಲಿ ಪಾರ್ಕಿಂಗ್ ಇರುವುದಿಲ್ಲ. ಬದಲಾಗಿ ಸೆಂಟ್ ಜೋಸೆಫ್ ಶಾಲೆ ಮೈದಾನ, ಯು.ಬಿ.ಸಿಟಿ, ಶಿವಾಜಿನಗರ ಬಸ್ ನಿಲ್ದಾಣ ಮತ್ತು ಫ್ರೀಡಂ ಪಾರ್ಕ್ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪಂದ್ಯ ವೀಕ್ಷಿಸಲು ಬರುವವರಿಗೆ ಅನುಕೂಲವಾಗುವಂತೆ ನಮ್ಮ ಮೆಟ್ರೋ ಸೇವೆಯನ್ನು ತಡರಾತ್ರಿ 1.15 ರವರೆಗೆ ವಿಸ್ತರಿಸಲಾಗಿದೆ.

ಹಂಚಿಕೊಳ್ಳಿ: