ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಪಕ್ಷಿ ಡಿಕ್ಕಿ
– ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ವಿಮಾನ ಸೇಫ್ ಲ್ಯಾಂಡಿಂಗ್ ಬೆಂಗಳೂರು: ವಿಶಾಖಪಟ್ಟಣದಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ (Air India Express Flight) ಸೋಮವಾರ ಹ...

ವಿಶಾಖಪಟ್ಟಣದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಹಕ್ಕಿಯೊಂದು ಅಪ್ಪಳಿಸಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು, ಅದರಲ್ಲಿ ಇದ್ದ 148 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ವಿಮಾನವು ನಿಗದಿತ ಸ್ಥಳಕ್ಕೆ ತಲುಪಿದ ನಂತರ ಅದನ್ನು ಪಾರ್ಕಿಂಗ್ ಸ್ಟ್ಯಾಂಡ್‌ಗೆ ಕಳುಹಿಸಲಾಯಿತು. ಘಟನೆಯಿಂದ ಸಿಬ್ಬಂದಿ ಅಥವಾ ಪ್ರಯಾಣಿಕರಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




