ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಗಣಿ ಗುತ್ತಿಗೆ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಗಣಿ ಗುತ್ತಿಗೆ ನವೀಕರಣ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಹಳೆಯ ದೂರಿನ ಅಂಶಗಳನ್ನೇ ಕಾಪಿ-ಪೇಸ್ಟ್ ಮಾಡಲಾಗಿದೆ ಎಂಬ ಸರ್ಕಾ...

ಗಣಿ ಗುತ್ತಿಗೆ ನವೀಕರಣದಲ್ಲಿ ಅವ್ಯವಹಾರ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಈ ಪ್ರಕರಣದ ಬಗ್ಗೆ ಈಗಾಗಲೇ ಲೋಕಾಯುಕ್ತದಲ್ಲಿ ತನಿಖೆಯಾಗಿ ದೂರು ಮುಕ್ತಾಯಗೊಂಡಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಸರ್ಕಾರದ ವಾದವನ್ನು ಪರಿಗಣಿಸಿದ ನ್ಯಾಯಾಲಯವು ಅರ್ಜಿದಾರರ ಪರ ವಕೀಲರು ಪ್ರಕರಣದಿಂದ ಹಿಂದೆ ಸರಿದ ನಂತರ ಪಿಐಎಲ್ ಅನ್ನು ವಜಾಗೊಳಿಸಿ ತೀರ್ಪು ನೀಡಿದೆ.




