ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಧನ್ವೀರ್ ಗೌಡ ತಂದೆಯಿಂದ ದೂರು
ನಟ ಧನ್ವೀರ್ ಗೌಡ ಅವರ ಮನೆಗೆ ನುಗ್ಗಿ ರೌಡಿಗಳಿಂದ ಬೆದರಿಕೆ ಹಾಕಿಸಿದ್ದಾರೆ ಎಂದು ಆರೋಪಿಸಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಇತರ ಮೂವರ ವಿರುದ್ಧ ಧನ್ವೀರ್ ತಂದೆ ತಿಮ್ಮೇಗೌಡ ದೂರು ನೀಡಿದ್ದಾರೆ.

ನಟ ಧನ್ವೀರ್ ಗೌಡ ಅವರ ನಿವಾಸಕ್ಕೆ ನುಗ್ಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸೇರಿದಂತೆ ನಾಲ್ವರ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧನ್ವೀರ್ ಅವರ ತಂದೆ ತಿಮ್ಮೇಗೌಡ ಅವರು ನೀಡಿದ ದೂರಿನ ಪ್ರಕಾರ, ವಿಜಯಲಕ್ಷ್ಮಿ, ಮ್ಯಾನೇಜರ್ ನಾಗರಾಜ್, ಭೋಜ ಮತ್ತು ಬಾಟಲಿ ಪ್ರಮೋದ್ ಅಕ್ಟೋಬರ್ 21ರ ರಾತ್ರಿ ಮನೆಗೆ ಬಂದು ಕುಟುಂಬಸ್ಥರಿಗೆ ಅವಾಜ್ ಹಾಕಿದ್ದಾರೆ. ಗೌರವ್ ಶೆಟ್ಟಿ ಮೂಲಕ ರೌಡಿಗಳನ್ನು ಕರೆಸಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




