ಬೆಂಗಳೂರು: ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೃಪಾ ಆಳ್ವಾ ವಿಚಾರಣೆ
* 2 ಗಂಟೆಗಳ ಕಾಲ ವಿಚಾರಣೆ ನಡೆಸಿದ ಸೈಬರ್ ಕ್ರೈಂ ಪೊಲೀಸರು ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ (Sting Operation) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೃಪಾ ಆಳ್ವಾ (Kripa Alva) ವಿ...

ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ ಅವರು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ನಿರೀಕ್ಷಣಾ ಜಾಮೀನು ಪಡೆದ ಬಳಿಕ ಮೊದಲ ಬಾರಿಗೆ ವಿಚಾರಣೆಗೆ ಬಂದ ಇವರನ್ನು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ಪ್ರಶ್ನಿಸಿದರು. ಈ ವೇಳೆ ಕೃಪಾ ಆಳ್ವಾ ಅವರೊಂದಿಗೆ ಅವರ ವಕೀಲರು ಇದ್ದರು. ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು, ನವೆಂಬರ್ 11 ರಂದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.




