ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬಿ.ಸಿ. ರೋಡ್ ಫ್ಲೈಓವರ್‌ನಿಂದ ಬೈಕ್ ಸಮೇತ ಬಿದ್ದ ಸವಾರ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಮಂಗಳೂರು: ಸಂಚಾರದಲ್ಲಿದ್ದ ಬೈಕ್ ನಿಯಂತ್ರಣ ತಪ್ಪಿ ಬಿ.ಸಿ. ರೋಡ್ ಫ್ಲೈಓವರ್‌ನಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗ...

· ದಕ್ಷಿಣ ಕನ್ನಡ
ಬಿ.ಸಿ. ರೋಡ್ ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬೈಕ್ ಸವಾರ – CCTVಯಲ್ಲಿ ಭಯಾನಕ ದೃಶ್ಯ ಸೆರೆ
ಹಂಚಿಕೊಳ್ಳಿ:

ಮಂಗಳವಾರ ಮಧ್ಯಾಹ್ನ ಬಿ.ಸಿ. ರೋಡ್ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದಿದ್ದಾರೆ. ಈ ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸರ್ವೀಸ್ ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಗಾಯಗೊಂಡ ಅತ್ತಾವರ ನಿವಾಸಿಯಾದ ಸವಾರನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮೆಟ್ ಧರಿಸಿದ್ದರಿಂದ ಸವಾರನಿಗೆ ತಲೆಗೆ ಗಂಭೀರ ಗಾಯಗಳಾಗಿಲ್ಲ. ಬಂಟ್ವಾಳ ಸಂಚಾರ ಪೊಲೀಸರು ಈ ಅಪಘಾತದ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಹಂಚಿಕೊಳ್ಳಿ: