ಮುಖ್ಯ ವಿಷಯಕ್ಕೆ ಹೋಗಿ
The Karnataka Today
7 Oct
ಸುದ್ದಿ
ಸುದ್ದಿ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ತಿರುಗೇಟು: ಕಾರ್ಕಳ ಕಾಂಗ್ರೆಸ್‌ನಿಂದ 'ಸತ್ಯಮೇವ ಜಯತೆ' ಕಾರ್ಯಕ್ರಮದ ಪೂರ್ವಭಾವಿ ಸಭೆ!

ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ರಾಜ್ಯದ ಜನರ ಜನಮನ ಗೆದ್ದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಹೊರಿಸಿ ಕಾರ್ಕಳದಲ್ಲಿ ಉಡುಪಿ ಜಿಲ್ಲೆಯ ಐದು ಬಿಜೆಪಿ ಶಾಸಕರುಗಳ ನ...

· ಉಡುಪಿ
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ
ಹಂಚಿಕೊಳ್ಳಿ:

ರಾಜ್ಯದ ಜನತೆಯ ಮನಗೆದ್ದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ, ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರ ನೇತೃತ್ವದಲ್ಲಿ ಕಾರ್ಕಳದಲ್ಲಿ ನಡೆದ ಪ್ರತಿಭಟನೆಯನ್ನು ವಿರೋಧಿಸಿ ಹಾಗೂ ಕಾರ್ಕಳದ ಜನತೆಗೆ ಸತ್ಯವನ್ನು ತಿಳಿಸುವ ಉದ್ದೇಶದಿಂದ ಕಾರ್ಕಳ ಕಾಂಗ್ರೆಸ್ ಸಮಿತಿಯು ಅಕ್ಟೋಬರ್ 08 ಗುರುವಾರದಂದು “ಸತ್ಯಮೇವ ಜಯತೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಿದ್ದು, ಈ ಸಂಬಂಧ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಮೂಲಕ ತುಳುನಾಡಿನ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿರುವ ರಾಜ್ಯ ಸರ್ಕಾರವು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯನ್ನು ಯಶಸ್ವಿಯಾಗಿ ನಡೆಸಿದೆ. ಇಂತಹ ಬೆಳವಣಿಗೆಗಳಿಂದ ಕಂಗೆಟ್ಟಿರುವ ಉಡುಪಿ ಜಿಲ್ಲೆಯ ಐವರು ಬಿಜೆಪಿ ಶಾಸಕರು, ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ಪ್ರತಿಭಟನೆ ನಡೆಸಿರುವುದು ಖಂಡನೀಯ. ಸೋಲಿನ ಭಯದಿಂದ ವಿಚಲಿತರಾದ ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಭಾಷಣ ಮಾಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಕಳದ ಜನತೆಗೆ ವಾಸ್ತವಾಂಶವನ್ನು ತಲುಪಿಸಲು ಸತ್ಯಮೇವ ಜಯತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಸಭೆಯಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ ಭಟ್, ರಾಜ್ಯ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಉಭಯ ಬ್ಲಾಕ್,ಗಳ ಪ್ರಚಾರ ಸಮಿತಿ ಅಧ್ಯಕ್ಷರುಗಳಾದ ನವೀನ್ ಅಡ್ಯಂತಾಯ ಹಾಗು ಅನಿಲ್ ಪೂಜಾರಿ ಮಾಳ, ಗ್ಯಾರಂಟಿ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಭಾನು ಬಾಸ್ಕರ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಕಾರ್ಯದರ್ಶಿ ಶ್ರೀಮತಿ ಪ್ರತಿಮಾ ರಾಣೆ, ಮಾಜಿ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಯುವ ಕಾಂಗ್ರೆಸ್ ವಿಧಾನಸಭಾ ಅದ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಮಲಿಕ್ ಅತ್ತೂರು, ನಗರ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಹಿರ್ಗಾನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಿರಿಯಣ್ಣ ಶೆಟ್ಟಿ ಸೇರಿದಂತೆ ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷರು, ವಿವಿಧ ಬ್ಲಾಕ್ ಪದಾಧಿಕಾರಿಗಳು, ನಾಮ ನಿರ್ದೇಶಿತ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಹಂಚಿಕೊಳ್ಳಿ: