ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಬ್ರಹ್ಮಾವರದ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳ ಮಾರಾಟ ಆರೋಪ: ಸ್ವಾಮೀಜಿ ನಾಪತ್ತೆ

ಉಡುಪಿ, ನ.5: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಶತಮಾನಗಳ ಇತಿಹಾಸ ಹೊಂದಿರುವ ಪ್ರಾಚೀನ ದೇವತಾ ವಿಗ್ರಹಗಳನ್ನು ಮಾರಾಟ... The post ಬಾಳೆಕುದ್ರು ಮಠದ ಪ್ರಾಚೀನ ದೇವತಾ ವಿಗ್ರಹಗಳ ಮಾರಾಟ ಆರೋಪ: ಸ್...

· ಉಡುಪಿ
ಬಾಳೆಕುದ್ರು ಮಠದ ಪ್ರಾಚೀನ ದೇವತಾ ವಿಗ್ರಹಗಳ ಮಾರಾಟ ಆರೋಪ: ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು- ಮಠಕ್ಕೆ ಬೀಗ ಜಡಿದು ನಾಪತ್ತೆ!
ಹಂಚಿಕೊಳ್ಳಿ:

ಬ್ರಹ್ಮಾವರದ ಬಾಳೆಕುದ್ರು ಮಠದ ಆರು ಐತಿಹಾಸಿಕ ದೇವತಾ ವಿಗ್ರಹಗಳು ನಾಪತ್ತೆಯಾಗಿದ್ದು, ಅವು ಅಂತಾರಾಷ್ಟ್ರೀಯ ಆನ್‌ಲೈನ್ ಮಾರಾಟ ತಾಣದಲ್ಲಿ ಕಾಣಿಸಿಕೊಂಡಿವೆ. ಈ ಬಗ್ಗೆ ಮಠದ ಶಿಷ್ಯ ಜಗದೀಶ್ ಐತಾಳ್ ಬೆಂಗಳೂರಿನ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಶ್ರಮ ಸ್ವಾಮೀಜಿ ಹಾಗೂ ಸಿಬ್ಬಂದಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪ ಕೇಳಿಬಂದ ಬೆನ್ನಲ್ಲೇ ಸ್ವಾಮೀಜಿ ಮಠಕ್ಕೆ ಬೀಗ ಜಡಿದು ತಲೆಮರೆಸಿಕೊಂಡಿದ್ದು, ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ. ಬೆಂಗಳೂರಿನ ಆಂಟಿಕ್ ಸಂಸ್ಥೆಯ ಮಾಲೀಕ ನಾಗೇಂದ್ರ ಪ್ರಸಾದ್ ಅವರನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಹಂಚಿಕೊಳ್ಳಿ: