ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಚಿಕ್ಕೋಡಿ: ಜೋಡಟ್ಟಿ ಗ್ರಾಮದಲ್ಲಿ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಚಿಕ್ಕೋಡಿ:ತಾಲೂಕಿನ ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಆಹಾರ ವಿಷಪೂರಿತಗೊಂಡು ಅಸ್ವಸ್ಥಗೊಂಡು ಕಬ್ಬೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ರೋಗಿಗಳ ಪರಾಮರ್...

· ಬೆಳಗಾವಿ
ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: THO ಕಾರ್ಯವೈಖರಿಗೆ ದುರ್ಯೋಧನ ಐಹೊಳೆ ತರಾಟೆ
ಹಂಚಿಕೊಳ್ಳಿ:

ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ನೂರಕ್ಕೂ ಅಧಿಕ ಮಂದಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಆಹಾರ ವಿಷಪೂರಿತವಾದ ಹಿನ್ನೆಲೆಯಲ್ಲಿ ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಭಕ್ತರನ್ನು ಕಬ್ಬೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ದುರ್ಯೋಧನ ಐಹೊಳೆ ಅವರು ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ತುರ್ತು ಪರಿಸ್ಥಿತಿಯಲ್ಲೂ ಕರ್ತವ್ಯಕ್ಕೆ ಹಾಜರಾಗದ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜಶೇಖರ ಖಣದಾಳೆ ಅವರನ್ನು ದೂರವಾಣಿ ಮೂಲಕ ಶಾಸಕರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಹಂಚಿಕೊಳ್ಳಿ: