ದಕ್ಷಿಣ ಕನ್ನಡಕ್ಕೆ ಅಶ್ವಿನಿ ವೈಷ್ಣವ್ ಭೇಟಿ, ವಂದೇ ಭಾರತ್ ರೈಲು ಸೇವೆಗೆ ಚಾಲನೆ
ಮಂಗಳೂರು: ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆಗಳ ಸಚಿವರಾದ ಸಚಿವ ಅಶ್ವಿನಿ ವೈಷ್ಣವ್(Ashwini Vaishnaw) ಅವರು ಹಲವು ಮಹತ್ವದ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡುವ ಉದ್ದೇಶದಿಂದ ದಕ್ಷಿಣ ಕನ...

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಪ್ರವಾಸದ ವೇಳೆ ಅವರು ಮಂಗಳೂರು-ಬೆಂಗಳೂರು ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ನಡುವಿನ ರೈಲ್ವೆ ಹಳಿಗಳ ವಿದ್ಯುದ್ದೀಕರಣ ಕಾಮಗಾರಿ ಮತ್ತು ನವೀಕೃತ ಸುಬ್ರಹ್ಮಣ್ಯ ರಸ್ತೆ ಅಮೃತ್ ಭಾರತ್ ನಿಲ್ದಾಣವನ್ನು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಿದ್ದಾರೆ. ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿದಂತೆ ಹಲವು ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಯೋಜನೆಗಳು ಕರಾವಳಿ ಭಾಗದ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿವೆ.




