ದಕ್ಷಿಣ ಕೊಡಗಿನ ಕೊಟ್ಟಿಗೇರಿಯಲ್ಲಿ ನಾಲ್ವರು ಶಂಕಿತ ಅಕ್ರಮ ವಲಸಿಗರು ಪತ್ತೆ
– ಗಡಿಯಲ್ಲಿ ನುಸುಳಿದ್ದ ಗಂಡ-ಹೆಂಡತಿ, ಇಬ್ಬರು ಮಕ್ಕಳು ಪತ್ತೆ – ಪೊಲೀಸರಿಗೆ ಒಪ್ಪಿಸಿದ ಸಂಘಟನೆಗಳು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ರಮ ವಲಸಿಗರ ಕುರಿತ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಕೊಡಗಿನ ಪೊನ್...

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಟ್ಟಿಗೇರಿಯಲ್ಲಿ ತೋಟದ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತ ವಲಸಿಗರನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಪತ್ತೆ ಹಚ್ಚಿದ್ದಾರೆ. ಪಶ್ಚಿಮ ಬಂಗಾಳದ ದಲ್ಲಾಳಿಯ ಮೂಲಕ ಭಾರತಕ್ಕೆ ಬಂದಿರುವುದಾಗಿ ತಿಳಿಸಿರುವ ಈ ನಾಲ್ವರು ಗಂಡ-ಹೆಂಡತಿ ಹಾಗೂ ಇಬ್ಬರು ಮಕ್ಕಳಾಗಿದ್ದಾರೆ. ಇವರ ಬಳಿ ಬೆಂಗಳೂರು ನೋಂದಣಿಯ ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಇವರ ದಾಖಲೆಗಳು ಹಾಗೂ ಹಿನ್ನೆಲೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಂಘಟನೆಗಳು ಪೊಲೀಸರಿಗೆ ದೂರು ನೀಡಿವೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರತೆಗೆಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.




