ಧಾರವಾಡ: ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ಪ್ರಹ್ಲಾದ್ ಜೋಶಿ
ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ರೈತ ಮುಖಂಡರ (Farmers Protest) ಜೊತೆ ನಡೆಸಿದ ಸಭೆಯಲ್ಲಿ, ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಕಬ್ಬು (Dharwad) ಬ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರೈತ ಮುಖಂಡರೊಂದಿಗೆ ಹುಬ್ಬಳ್ಳಿಯ ಅತಿಥಿ ಗೃಹದಲ್ಲಿ ಸಭೆ ನಡೆಸಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ರೈತರ ಪಾದಯಾತ್ರೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ. ಸಮಿತಿಯ ವರದಿಯನ್ನು ಪರಿಗಣಿಸಿ ರೈತರ ಬೇಡಿಕೆಗಳನ್ನು ಪೂರೈಸುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಭರವಸೆಯ ಮೇಲೆ ರೈತರು ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಮುಂದುವರಿಸುವುದಾಗಿ ರೈತ ಮುಖಂಡ ಚೂನ್ನಪ್ಪ ಪೂಜಾರ ತಿಳಿಸಿದ್ದಾರೆ.




