ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಎಸ್.ವಿ. ಸಂಕನೂರಗೆ 9,323 ಮತಗಳ ಜಯ

ಧಾರವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ(Karnataka Vidhan Parishad Election) ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ(BJP) ಅಭ್ಯರ್ಥಿ ಎಸ್.ವಿ. ಸಂಕನೂರ(SV Sankanur) 9,3...

· ಧಾರವಾಡ
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರಗೆ ಭರ್ಜರಿ ಗೆಲುವು; 3ನೇ ಬಾರಿಗೆ ಪ್ರವೇಶ
ಹಂಚಿಕೊಳ್ಳಿ:

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಮತ ಎಣಿಕೆಯಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರು ಗೆಲುವು ಸಾಧಿಸಿದ್ದಾರೆ. ಒಟ್ಟು 33,711 ಮತಗಳನ್ನು ಪಡೆದ ಅವರು, ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮೋಹನ ಲಿಂಬಿಕಾಯಿ ಅವರನ್ನು 9,323 ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಸಂಕನೂರ ಅವರು ಸತತ ಮೂರನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಿಮ ಹಂತದವರೆಗೂ ಸ್ಪರ್ಧೆಯಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸಂಕನೂರ ಅವರ ಗೆಲುವನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.

ಹಂಚಿಕೊಳ್ಳಿ: