ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಧಾರವಾಡದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ, ನ.26 ರವರೆಗೆ ಗಡುವು

ಧಾರವಾಡ: ಕಬ್ಬು ಬೆಳೆಗಾರರ (Sugarcane Farmer) ಬೇಡಿಕೆಗಳ ಈಡೇರಿಕೆಗೆ ಹೋರಾಟಗಾರರು ನ.26ಕ್ಕೆ ಡೆಡ್‌ಲೈನ್‌ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ಪ್ರಹ್ಲಾದ್ ಜೋಶಿಯವರ (Pralhad Joshi) ಮನೆಗೆ ಮುತ್ತಿಗೆ ಹಾಕುವುದಾ...

· ಧಾರವಾಡ
ಬೇಡಿಕೆ ಈಡೇರಿಕೆಗೆ ನ.26ಕ್ಕೆ ಡೆಡ್‌ಲೈನ್‌ ನೀಡಿದ ಕಬ್ಬು ಬೆಳೆಗಾರರು
ಹಂಚಿಕೊಳ್ಳಿ:

ಧಾರವಾಡದಲ್ಲಿ ಕಬ್ಬು ಬೆಳೆಗಾರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಸದ್ಯಕ್ಕೆ ತಡೆಹಿಡಿದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸಭೆಯ ಬಳಿಕ ರೈತ ಮುಖಂಡ ಚೂನಪ್ಪ ಪೂಜೇರಿ ಅವರು ನವೆಂಬರ್ 26 ರವರೆಗೆ ಗಡುವು ನೀಡಿರುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ನಿಗದಿತ ದಿನಾಂಕದೊಳಗೆ ಬೇಡಿಕೆಗಳು ಈಡೇರದಿದ್ದರೆ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ. ಎಂಎಸ್‌ಪಿ ಹೆಚ್ಚಳ, ಎಥೆನಾಲ್ ದರ ನಿಗದಿ ಹಾಗೂ ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೆ ರೈತರು ಒತ್ತಾಯಿಸಿದ್ದಾರೆ.

ಹಂಚಿಕೊಳ್ಳಿ: