ಹಾಸನ: ಹಾಸನಾಂಬೆ ದರ್ಶನಕ್ಕೆ ಮೈತುಂಬಾ ಚಿನ್ನಾಭರಣ ಧರಿಸಿ ಬಂದ ವ್ಯಕ್ತಿ
ಐತಿಹಾಸಿಕ ಹಾಸನಾಂಬೆ ದರ್ಶನೋತ್ಸವಕ್ಕೆ ಆಗಮಿಸಿದ್ದ ಭಕ್ತರೊಬ್ಬರು ಮೈತುಂಬಾ ಕಿಲೋಗಟ್ಟಲೆ ಚಿನ್ನ ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ವಿಐಪಿ ಪಾಸ್ ಪಡೆಯದೆ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದಿದ್...

ವರ್ಷಕ್ಕೊಮ್ಮೆ ತೆರೆಯುವ ಹಾಸನಾಂಬೆ ದೇವಾಲಯಕ್ಕೆ ಭಕ್ತರ ದಂಡು ಹರಿದುಬರುತ್ತಿದ್ದು, ಈ ವೇಳೆ ಮೈತುಂಬಾ ಕಿಲೋಗಟ್ಟಲೆ ಬಂಗಾರದ ಆಭರಣಗಳನ್ನು ಧರಿಸಿದ ವ್ಯಕ್ತಿಯೊಬ್ಬರು ಎಲ್ಲರ ಗಮನ ಸೆಳೆದಿದ್ದಾರೆ. ಕತ್ತು, ಕೈ ಮತ್ತು ಬೆರಳುಗಳಲ್ಲಿ ಭಾರಿ ಪ್ರಮಾಣದ ಚಿನ್ನದ ಸರ, ಬಳೆ ಮತ್ತು ಉಂಗುರಗಳನ್ನು ತೊಟ್ಟಿದ್ದ ಇವರನ್ನು ಕಂಡು ಭಕ್ತರು ಅಚ್ಚರಿ ವ್ಯಕ್ತಪಡಿಸಿದರು. ವಿಶೇಷವಾಗಿ, ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಧರಿಸಿದ್ದರೂ ಈ ವ್ಯಕ್ತಿ ಯಾವುದೇ ವಿಐಪಿ ಸವಲತ್ತು ಪಡೆಯದೆ ಸಾಮಾನ್ಯ ಭಕ್ತರಂತೆ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ದರ್ಶನದ ಬಳಿಕ ಅವರೊಂದಿಗೆ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳಲು ಜನರು ಮುಗಿಬಿದ್ದ ದೃಶ್ಯ ಕಂಡುಬಂತು.




